ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸಿದ್ದರಾಮಯ್ಯಗೆ ಸನ್ಮಾನ…

574
firstsuddi

ಬೆಂಗಳೂರು: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಇಂದು ಸಚಿವ ಜಮೀರ್ ಅಹಮದ್ ಅವರ ನೇತೃತ್ವದಲ್ಲಿ ಮುಸ್ಲಿಂ ಧರ್ಮ ಗುರುಗಳು ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸನ್ಮಾನ ಮಾಡಿದರು. ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯರವರು ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಟಿಪ್ಪು ಖಡ್ಗ ಕೈಯಲ್ಲಿ ಹಿಡಿದು ಪೇಟ ತೊಟ್ಟಾಗ ಬಿಜೆಪಿ ಮುಖಂಡರು ಯಾರೂ ವಿರೋಧ ಮಾಡಲಿಲ್ಲ. ಟಿಪ್ಪು ಪುಸ್ತಕಕ್ಕೆ ಜಗದೀಶ್ ಶೆಟ್ಟರ್ ಮುನ್ನುಡಿ ಬರೆದಿದ್ದಾರೆ. ಬಿಜೆಪಿ ನಾಯಕರು ಟಿಪ್ಪು ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.