ಎನ್.ಆರ್.ಪುರ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ,ಒರ್ವ ವಿದ್ಯಾರ್ಥಿನಿ ಸಾವು, 20 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ…

762
firstsuddi

ಚಿಕ್ಕಮಗಳೂರು :ಶಾಲಾ ಬಸ್ ಪಲ್ಟಿಯಾಗಿ ಒರ್ವ ವಿದ್ಯಾರ್ಥಿನಿ ಮೃತಪಟ್ಟು, 20 ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ನಡೆದಿದೆ.ಶಾಲಾ ಪ್ರವಾಸ ಹಿನ್ನೆಲೆ ಶೃಂಗೇರಿಗೆ ಆಗಮಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೂರ್ಣಪ್ರಗ್ಞಾ ಶಾಲೆಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ದಿಯಾ (16) ಎಂಬ 10 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.