ಬೆಂಗಳೂರು : ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಮನೆಗೆ ನಾಗರತ್ನ ಅವರು ಹೋಗದಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶ ನೀಡುವುದರ ಜೊತೆಗೆ ವಿಜಯ್ ವಿರುದ್ಧ ಮಾಧ್ಯಮಗಳಿಗೆ ಸಂದರ್ಶನ ನೀಡುವಂತಿಲ್ಲ. ವಿಜಯ್ ಯಾಗಲಿ, ಅವರ ಕುಟುಂಬಸ್ಥರ ವಿರುದ್ಧವೂ ಬಹಿರಂಗವಾಗಿ ಹೇಳಿಕೆ ನೀಡುವಂತಿಲ್ಲ ಎಂದು ಕೋರ್ಟ್ ಆದೇಶವನ್ನು ನೀಡಿದೆ. ಪತ್ನಿಯರಿಬ್ಬರ ಜಗಳದಿಂದ ಬೇಸತ್ತ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.