ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ

661

ಮಂಗಳೂರು : ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ, ಅಕ್ಟೋಬರ್ 29ರಂದು ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಹೆಗ್ಗಡೆಯವರನ್ನ ಅಭಿನಂದಿಸಲಿದ್ದಾರೆ. ಅ. 29ರಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರೋ ಪ್ರದಾನಿ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಮಂಜುನಾಥ ಸ್ವಾಮಿಯ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಉಜಿರೆಯಲ್ಲಿ ನಡೆಯಲಿರೋ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಉಜಿರೆಯಲ್ಲಿ ಸ್ವಸಹಾಯ ಗುಂಪಿನ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಗುಂಪು ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ತಲುಪಿ, ಅಲ್ಲಿಂದ ದೆಹಲಿಗೆ ತೆರಳಲಿದ್ದಾರೆ.

 

LEAVE A REPLY

Please enter your comment!
Please enter your name here