ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ”. “ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಕಳೆದ ವರ್ಷವೂ ಕೂಡಾ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಡಿ.ಕೆ. ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ @DKShivakumar ಮನೆ ಮೇಲೆ @narendramodi ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ @BJP4India ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
— Siddaramaiah (@siddaramaiah) October 5, 2020










