ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರಿಗಳಿಂದ ಹೊಸ ಪ್ರಯತ್ನ…

572
firstsuddi

ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲಿಗೇರಿಸಲು ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವೆ ಆರೋಪಿಗಳು ತಮ್ಮ ಜೀವವನ್ನು ಉಳಿಸಿಕೊಳ್ಳಲು ಹೊಸ ಪ್ರಯತ್ನವನ್ನು ಮಾಡಿದ್ದಾರೆ. ಈಗಾಗಲೇ ನಾಲ್ವರು ಆರೋಪಿಗಳ ಜೀವ ಉಳಿಸಿಕೊಳ್ಳುವ ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳು ಮುಕ್ತಾಯವಾಗಿದ್ದು, ಆದರೂ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಆರೋಪಿ ವಿನಯ್ ಶರ್ಮಾ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಆರೋಪಿಗಳು ಸಲ್ಲಿಸಿದ್ದ ಎಲ್ಲಾ ಕ್ಷಮಾದಾನ ಅರ್ಜಿಗಳನ್ನು ಹೈ ಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರಪತಿಗಳಿಂದ ವಜಾಗೊಂಡಿದ್ದು, ಈಗಾ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಹೊಸ ಪ್ರಯತ್ನವನ್ನು ಮಾಡಿದ್ದಾರೆ. ಆರೋಪಿಗಳಿಗೆ ಗಲ್ಲಿಗೇರಿಸಲು ಮಾರ್ಚ್ 20ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.