ಮಂಡ್ಯ :ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯ ಬಳಿಕ ಇದೀಗ ಅವರ ಪುತ್ರ, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ಗದ್ದೆಗಿಳಿದು ಭತ್ತದ ನಾಟಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮದ ರಾಮಯ್ಯ ಎಂಬುವವರ ಗದ್ದೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ನಾಟಿ ಮಾಡಿದ್ದಾರೆ.ಮದ್ದೂರು ಭಾಗದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ಮಾಡುತ್ತಿದ್ದರು. ಈ ವೇಳೆ ಗದ್ದೆಯಲ್ಲಿ ರೈತರು ನಾಟಿ ಮಾಡುತ್ತಿರುವುದನ್ನು ಗಮನಿಸಿದ ನಿಖಿಲ್ ಅವರು ಗದ್ದೆಯಲ್ಲಿ ನಾಟಿ ಮಾಡುತ್ತಿದ್ದವರ ಜೊತೆ ಸೇರಿ ತಾವು ಸಹ ನಾಟಿ ಮಾಡಿದ್ದಾರೆ.










