ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆಮಾಡಿದ್ದು, ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇತ್ತೀಚಿಗಷ್ಟೇ ದೇವೇಗೌಡ ಅವರ ಕುಟುಂಬ ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ವಧುವಿನ ಮನೆಗೆ ಭೇಟಿ ನೀಡಿ ಹೆಣ್ಣು ನೋಡುವ ಶಾಸ್ತ್ರವನ್ನು ಮುಗಿಸಿಕೊಂಡು ಬಂದಿದ್ದರು. ಇದೀಗ ವಧುವಿನ ಮನೆಯವರು ದೇವೇಗೌಡ ಅವರ ಮನೆಗೆ ತೆರಳಿ ಮದುವೆ ಮಾತುಕತೆ ನಡೆಸಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ನಿಶ್ಚಿತಾರ್ಥ ಫೆಬ್ರವರಿ 10ಕ್ಕೆ ನಡೆಯಲಿದ್ದು, ಏಪ್ರಿಲ್ ತಿಂಗಳಿನಲ್ಲಿ ಮದುವೆ ನಿಗದಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.










