ಲಂಡನ್ ನಲ್ಲಿ ನೀರವ್ ಮೋದಿ ಬಂಧನ…

158
firstsuddi

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ. ನೀರವ್ ಮೋದಿ ವಿರುದ್ಧ ಲಂಡನ್​ನ ವೆಸ್ಟ್​​ಮಿನ್​​​​ಸ್ಟರ್​​​ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿತ್ತು. ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ನೀರವ್ ಮೋದಿಯನ್ನು ಬಂಧಿಸಲಾಗಿದೆ.  ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 13,000 ಕೋಟಿ ರೂಪಾಯಿಗಳನ್ನು ವಂಚಿಸಿ ಲಂಡನ್‌ಗೆ ಪರಾರಿಯಾಗಿದ್ದರು.