ನವದೆಹಲಿ : 2012ರ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯಿಂದ ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಲಾಗಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದಾರೆ. ನಿರ್ಭಯಾ ಅತ್ಯಾಚಾರಿಗಳಿಗೆ ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ನ್ಯಾಯಾಲಯ ಹೊಸ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಈ ಹಿಂದೆ ಆರೋಪಿ ವಿನಯ್ ಶರ್ಮಾ ಜೈಲಿನಲ್ಲಿ ಗೋಡೆಗೆ ತಲೆ ಚಚ್ಚಿಕೊಂಡು ಮಾನಸೀಕ ಅಸ್ವಸ್ಥನಂತೆ ಬಿಂಬಿಸಿದ್ದು, ಬಳಿಕ ನಾಲ್ವರು ಆರೋಪಿಗಳನ್ನು ಒಂದೇ ದಿನ ಗಲ್ಲಿಗೇರಿಸಬೇಕೆಂದು ಕೇಂದ್ರ ಗೃಹ ಸಚಿವಾಲಯ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದ್ದು, ಒಂದಲ್ಲ ಒಂದು ರೀತಿಯಲ್ಲಿ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಳಂಬವಾಗುತ್ತಲೇ ಬರುತ್ತಿದೆ.










