ಬೆಂಗಳೂರು : ಏರೋ ಇಂಡಿಯಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ ಉನ್ನತಮಟ್ಟದ ಸಭೆ ಜರುಗಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ರಾಜ್ಯ ಗೃಹ ಸಚಿವರಾದ ಎಂ.ಬಿ ಪಾಟೀಲ್ ಅವರು ಕಾರ್ಯಕ್ರಮದ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.










