ಬೆಂಗಳೂರು : ಬಿಗ್ ಬಾಸ್ ಸೀಸನ್ 5 ಸ್ಪರ್ಧಿಯಾಗಿದ್ದ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿ ಅವರಿಗೆ ಗಿಫ್ಟ್ ಕಳುಹಿಸಿದ್ದಾರೆ . ಕಾಫಿ ಮಗ್ ಮೇಲೆ ನಾನು ನಿನ್ನ ತುಂಬಾ ಮಿಸ್ ಮಾಡಿಕೊಳ್ತಿದ್ದೀನಿ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ ಎಂದು ಬರೆದು ಚಂದನ್ ಅವರಿಗೆ ಕಳಿಸಿದ್ದಾರೆ. ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರು ಕಳುಹಿಸಿರುವ ಕಾಫಿ ಮಗ್ ಫೊಟೊವನ್ನು ಇನ್ ಸ್ಟಾಗ್ರಾಂನಲ್ಲಿ ಹಾಕಿಕೊಂಡಿದ್ದು, ನಾನೂ ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಚಂದನ್ ಶೆಟ್ಟಿ ಅವರು ಬರೆದುಕೊಂಡಿದ್ದಾರೆ.










