ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ:ಎಂ.ಬಿ.ಪಾಟೀಲ್…

237

ಬೆಂಗಳೂರು: ಶಾಸಕ ಆನಂದ ಸಿಂಗ್ ಅವರ ಮೇಲೆ ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಮೇಲೆ ಎಫ್‍ಐಆರ್ ದಾಖಲಾಗುತ್ತಿದ್ದಂತೆ ಗಣೇಶ್ ಅವರು ಕಣ್ಮರೆಯಾಗಿದ್ದಾರೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಂಪ್ಲಿ ಗಣೇಶ್ ಮೇಲೆ ಎಫ್ಐಆರ್ ದಾಖಲಾಗಿದೆ. ಪೊಲೀಸರು ಅವರ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾರ ಹಸ್ತಕ್ಷೇಪ  ಇಲ್ಲ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.