ಎಚ್.ಡಿ ದೇವೇಗೌಡ ಅವರಿಗೆ ಗಣೇಶ ಹಬ್ಬದ ಶುಭಾಶಯ ಕೋರಲು ಬಂದಿದ್ದೆ.- ಡಾ.ಜಿ.ಪರಮೇಶ್ವರ…

584
firstsuddi

ಬೆಂಗಳೂರು: ಇಂದು  ಉಪಮಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಎಚ್​.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ,ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರಿಗೆ ಗಣೇಶ ಹಬ್ಬದ ಶುಭಾಶಯ ಕೋರಲು ಬಂದಿದ್ದೆ. ನೀವು ಅಂದುಕೊಂಡ ಹಾಗೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಜಾರಕಿಹೊಳಿ ಬ್ರದರ್ಸ್ ಅಸಮಾಧಾನಕ್ಕೆ ನಾವು ಬಗ್ಗಲ್ಲ. ಕಡಿವಾಣ ಹಾಕುತ್ತೇವೆ. ಈ ಸಮಸ್ಯೆಯನ್ನು ಆದಷ್ಟು ಬೇಗ ಸರಿ ಮಾಡುತ್ತೇವೆ. ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಬೆಳಗಾವಿಯಲ್ಲಿ ಪಕ್ಷದ ಕಚೇರಿ ಕಟ್ಟಲು ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ನೀಡಿದ್ದೆವು. ಆಗ ಅವರು ಬೆಳಗಾವಿಗೆ ಹೋಗಿ ಬಂದು ಮಾಡುತ್ತಿದ್ದರು. ಬೆಳಗಾವಿ ರಾಜಕೀಯಕ್ಕೆ ಅವರು ಕೈ ಹಾಕಿಲ್ಲ ಎಂದಿದ್ದಾರೆ.