ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್…

283
firstsuddi

ನವದೆಹಲಿ: ಎಸ್ಸಿ, ಎಸ್ಟಿ ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಇಂದು ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್‌ನ ಐವರು ಸದಸ್ಯರ ಸಂವಿಧಾನಿಕ ಪೀಠ, 2006ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತೀರ್ಪಿನಿಂದಾಗಿ ಕೇಂದ್ರ ಸರ್ಕಾರ ನಿರಾಳವಾಗಿದೆ.