ಶ್ರೀಕ್ಷೇತ್ರ ಧರ್ಮಸ್ಥಳದ ಮಹಾಮಸ್ತಕಾಭಿಷೇಕದ ಚಪ್ಪರ ಕುಸಿತ ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತಂಕ ಬೇಡ:ಸಿಎಂ ಕುಮಾರಸ್ವಾಮಿ…

246
firstsuddi

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯ ಚಪ್ಪರ ಕುಸಿದು ಬಿದ್ದ ಘಟನೆ ಇಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಮಹಾಮಸ್ತಕಾಭಿಷೇಕದ ಚಪ್ಪರ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆತಂಕ ಬೇಡ ಕೂಡಲೇ ನಾನು ಸ್ಥಳೀಯ ಪೊಲೀಸ್ ವರಿಷ್ಠರೊಂದಿಗೆ ಮಾತನಾಡಿ ಮಾಹಿತಿ ತರಿಸಿಕೊಂಡಿದ್ದೇನೆ. ಅಗತ್ಯವಿರುವ ಎಲ್ಲಾ ರಕ್ಷಣಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.