ಆಪರೇಷನ್‌ ಆಡಿಯೊ ಪ್ರಕರಣ: ಎಸ್‌ಐಟಿ ತನಿಖೆಗೆ ಬಿಜೆಪಿ ವಿರೋಧ…

248
firstsuddi

ಬೆಂಗಳೂರು: ಆಪರೇಷನ್‌ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ವನ್ನು ವಿಶೇಷ ತನಿಖಾ ದಳಕ್ಕೆ ಒಪ್ಪಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು,  ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆಯಾಗಲಿ ಎಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.