ಉಸ್ಮಾನಿಯಾ ವಿವಿಯಿಂದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖಲು…

151
firstsuddi

ಹೈದರಾಬಾದ್ : ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ತೇಜಸ್ವಿ ಸೂರ್ಯ ಅವರು ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಅಂಗವಾಗಿ ಪಕ್ಷದ ಪರ ಪ್ರಚಾರ ಮಾಡಲು ಹೈದರಾಬಾದ್ ಗೆ ತೆರಳಿದ್ದು, ಈ ವೇಳೆ ತೇಜಸ್ವಿ ಸೂರ್ಯ ಅವರು ಅನುಮತಿಯಿಲ್ಲದೆ ನಗರದ ಉಸ್ಮಾನಿಯಾ ವಿಶ್ವವಿದ್ಯಾಲಯದ ಪ್ರಾಂಗಣದಲ್ಲಿ ಪ್ರಚಾರಕ್ಕೆ ಮುಂದಾಗಿದ್ದರು. ಇದರಿಂದಾಗಿ ಉಸ್ಮಾನಿಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ತೇಜಸ್ವಿ ಸೂರ್ಯ ಅವರ ವಿರುದ್ಧ ಉಸ್ಮಾನಿಯಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.