ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇಡಬೇಕು ಎಂಬುದೇ ನಮ್ಮ ಗುರಿ- ಮಲ್ಲಿಕಾರ್ಜುನ ಖರ್ಗೆ…

321
firstsuddi

ನವದೆಹಲಿ – ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆರವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನಡೆಸುತ್ತೇವೆ ಎಂದು ಹೇಳಿದ್ದು , ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇಡಬೇಕು ಎಂಬುದೇ ನಮ್ಮ ಗುರಿ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ.ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಂದು ಹೇಳಿದ್ದು ನಂತರ ಸಮ್ಮಿಶ್ರ ಸರ್ಕಾರದ ಕುರಿತು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆರವರು, ಸಿದ್ದರಾಮಯ್ಯರವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ನಾನೂ ಸಹ ಆ ವೀಡಿಯೋ ಟಿವಿಯಲ್ಲಿ ಪ್ರಸಾರವಾಗಿದ್ದನ್ನು ನೋಡಿದ್ದೇನೆ. ಆದರೆ ಸಿದ್ದರಾಮಯ್ಯ ಅವರು ಯಾವ ಸಂದರ್ಭದಲ್ಲಿ ಆ ಹೇಳಿಕೆ ನೀಡಿದ್ದಾರೆ, ನಿಜವಾಗಿಯೂ ಅವರೇ ಹೇಳಿದ್ದಾರಾ ಎಂಬ ಬಗ್ಗೆ ಕೇಳಬೇಕಿದೆ. ನಾಳೆ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿ ಚರ್ಚೆ ನಡೆಸುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.