ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಬೆಂಬಲ ಇಲ್ಲ. ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸ ಆಗಿಲ್ಲ ಅಂದರೆ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ. ಯಾವುದೇ ಪಕ್ಷದವರೂ ಹೀಗೆ ಹೇಳಿದರೂ ಅದು ತಪ್ಪು ಎಂದು ತಿಳಿಸಿದ್ದು, ಮೈತ್ರಿ ಸರ್ಕಾರದಿಂದ ರಾಜ್ಯದ ಸಂಸದರಿಗೆ ಐಪೋನ್ ಗಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ನಮ್ಮ ಸಂಸದರು ಐಫೋನ್ ಗಿಫ್ಟ್ ಪಡೆಯುವುದಿಲ್ಲ. ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಸಬೇಕು. ಇದರಿಂದ ಕಳೆದ ಸರ್ಕಾರದ ಆಡಳಿತ ತಿಳಿಯುತ್ತದೆ ಎಂದು ತಿಳಿಸಿದ್ದಾರೆ.