ವಿಶಾಖ ಪಟ್ಟಣಂ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪೆಥಾಯ್ ಚಂಡ ಮಾರುತ ಆಂಧ್ರಪ್ರದೇಶದಲ್ಲಿ ಅಪ್ಪಳಿಸಿದ್ದು, ಗಂಟೆಗೆ 150 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಒಂಗೊಲೆ ಹಾಗೂ ಕಾಕಿನಾಡ ನಡುವಿನ ಪ್ರದೇಶಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಭಾಗದ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾರ್ಯಾಚರಣೆಯಲ್ಲಿ ತೊಡಗಿದೆ.










