ಕಲಬುರಗಿ: ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕನಿಷ್ಠ 2.ರೂ ಇಳಿಸಲಾಗುವುದು. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ ಈ ನಿಟ್ಟಿನಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಿ ರಾಜ್ಯದ ಜನತೆಯ ಹೊರೆ ಕಡಿಮೆ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ನಿರ್ವಹಿಸಲಿದೆ. ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.










