ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದರು. ಏಪ್ರಿಲ್ 14ರಂದು ಲಾಕ್‍ಡೌನ್ ಮುಕ್ತಾಯವಾಗಲಿದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಲಾಕ್‍ಡೌನ್ ಮುಂದುವರೆಸಬೇಕಾ ಬೇಡವಾ ಎಂಬುವುದರ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ದೇಶಾದ್ಯಂತ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ಒಡಿಶಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಏಪ್ರಿಲ್ 30ರ ವರೆಗೆ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಲಾಕ್‍ಡೌನ್ ಮುಂದವರೆಸಬೇಕಾ ಎಂಬುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗಿನ ಸಭೆ ಮುಕ್ತಾಯವಾದ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಕಾದುನೋಡಬೇಕಾಗಿದೆ.










