ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಂಗನ್ (45) ಅವರು ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಮೈಸೂರಿನ ಸುಯೋಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಂಗನ್ ಅವರು ಇಂದು ಮೃತಪಟ್ಟಿದ್ದಾರೆ.










