ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇವಾಲಯದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಸಾಲೂರು ಕಿರಿಯಶ್ರೀ , ದೇವಾಲಯದ ವ್ಯವಸ್ಥಾಪಕ ಮಾದೇಶ್ ಮತ್ತು ಮಾದೇಶ್ ಪತ್ನಿ ಅಂಬಿಕಾ, ದೊಡ್ಡಯ್ಯ ಎಂಬುವರು ಪ್ರಮುಖ ಆರೋಪಿಗಳು ಎನ್ನಲಾಗುತ್ತಿದ್ದು, ನಾಗರಕೋಯಿಲು ದೇವಾಲಯದ ಅರ್ಚಕ ದೊಡ್ಡಯ್ಯ ಪ್ರಸಾದಕ್ಕೆ ವಿಷ ಬೆರೆಸಿದ್ದು ನಾನೇ ಎಂದು ತಪೋಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸರು ಕೊಳ್ಳೇಗಾಲದ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಡುಗೆ ಭಟ್ಟ ಪುಟ್ಟಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.










