ಯಾದಗಿರಿ: ವಿಷ ಬೆರೆಸಿದ್ದ ಬಾವಿ ನೀರು ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆವೋರ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ನಡೆದಿದೆ. ತೆಗ್ಗಹಳ್ಳಿಯ ಹೊನ್ನಮ್ಮ(65) ಮೃತಪಟ್ಟ ದುರ್ದೈವಿ. ನಿನ್ನೆ ಬಾವಿ ನೀರು ಸೇವಿಸಿದ ಬಳಿಕ ಹೊನ್ನಮ್ಮ ರಕ್ತ, ವಾಂತಿ ಮಾಡಿಕೊಂಡಿದ್ದು, ತಕ್ಷಣವೇ ಅವರನ್ನು ಕೆಂಭಾವಿ ಸಮುದಾಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು. ಆದರೆ ರಸ್ತೆ ಮಧ್ಯೆ ಹೊನ್ನಮ್ಮ ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಬಾವಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಶಂಕೆ ವ್ಯಕ್ತವಾಗಿದೆ.










