ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಯುವಕನನ್ನು ಬಂಧಿಸಿದ ಪೊಲೀಸರು…

178
firstsuddi

ನವದೆಹಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಾರಿಯ ಐಪಿಎಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತವಾಗಿ ಸೋಲು ಅನುಭವಿಸುತ್ತಲೇ ಇದ್ದು, ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕೂಡಾ ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಕಳೆದ ಬುಧವಾರ ನಡೆದ ಚೆನ್ನೈ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಹೀನಯವಾಗಿ ಸೋಲು ಕಂಡಿತ್ತು. ಇದರಿಂದ ಟ್ವಿಟರ್ ಖಾತೆಯಲ್ಲಿ ಕಮೆಂಟ್ ಮಾಡಿರುವ ವಿಜಯ್ ಎಂಬ ವ್ಯಕ್ತಿ ಧೋನಿ ಅವರ 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೇ ಅಸಭ್ಯ ಪದಗಳಿಂದ ನಿಂದಿಸಿದ್ದರು. ಈ ಕುರಿತು ಜಾರ್ಖಂಡ್‍ನ ರಾಂಚಿಯಲ್ಲಿರುವ ರತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೇಧಿಸಿದ ಪೊಲೀಸರು ಧೋನಿ ಅವರ ಮಗಳಿಗೆ ಬೆದರಿಕೆ ಹಾಕಿದ್ದ ಗುಜರಾತ್‍ನ ಕಚ್ ಜಿಲ್ಲೆಯ ಆರೋಪಿಯನ್ನು ಬಂಧಿಸಿದ್ದಾರೆ.