ಟಿಪ್ಪು ಜಯಂತಿ ಹಿನ್ನಲೆ ರಾಜ್ಯಾದ್ಯಂತ ಹೈ ಅಲರ್ಟ್.

233
firstsuddi

ಬೆಂಗಳೂರು :ಟಿಪ್ಪು ಜಯಂತಿಗೆ ಬಿಜೆಪಿಯಿಂದ ತೀವ್ರ ವಿರೋಧವಿದ್ದರೂ ರಾಜ್ಯಾದ್ಯಂತ ಇಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿದೆ.ಆಚರಣೆ ವಿರೋಧಿಸಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ರಾಜ್ಯಾದ್ಯಂತ ಮುನ್ನೆಚ್ಚರಿಕೆ  ಕ್ರಮವನ್ನು ಕೈಗೊಂಡಿದೆ. ಕೊಡಗು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು , ಇಂದು ಖಾಸಗಿ ಬಸ್ ಸಂಚಾರವೂ ಬಂದ್ ಆಗಿದೆ.ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಳಗಾವಿ, ಕೊಡಗು , ಮಂಡ್ಯ, ಧಾರವಾಡ, ಕಲಬುರಗಿ, ಉತ್ತರ ಕನ್ನಡ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭಾನುವಾರ ಬೆಳಿಗೆ 6 ಗಂಟೆವರೆಗೂ ಸಾರ್ವಜನಿಕರು ಗುಂಪುಗೂಡುವುದು, ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ  ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.