ಕೊಡಗು: ನಾಳೆ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿರುವುದರಿಂದ ಕೊಡಗು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು , ನಾಳೆ ಖಾಸಗಿ ಬಸ್ ಸಂಚಾರವೂ ಬಂದ್ ಅಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.










