ಕೇಂದ್ರ ಸಚಿವ ಅನಂತ್​ ಕುಮಾರ್​ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು…

884
firstsuddi

ಕೇಂದ್ರ ಸಚಿವ ಅನಂತ್​ ಕುಮಾರ್​  ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಸಂತಾಪ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಮತ್ತು ಅನುಭವಿ ಸಂಸದೀಯ ಶ್ರೀ ಎಚ್.ಎನ್. ಅನಂತ್ ಕುಮಾರ್ ಅವರ ನಿಧನದ ಸುದ್ದಿಕೇಳಿ  ತುಂಬ ನೋವಾಗಿದೆ.ಅವರ ನಿಧನ ನಮ್ಮ ದೇಶಕ್ಕೆ ಮತ್ತು ವಿಶೇಷವಾಗಿ ಕರ್ನಾಟಕ ಜನರಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.  

ಕರ್ನಾಟಕದಲ್ಲಿ ಬಿಜೆಪಿ ಬೆಳವಣಿಗೆಗೆ ಅನಂತ ಕುಮಾರ್ ಅವರ ಕೊಡುಗೆ ಅನನ್ಯ. ಅವರು ಹಲವು ಖಾತೆಗಳನ್ನು ನಿಭಾಯಿಸಿದ್ದ ಅನುಭವಿ ಆಡಳಿತಗಾರ. ಬೆಂಗಳೂರಿನಲ್ಲಿ ಬಿಜೆಪಿ ಬಲ ವರ್ಧನೆಗೆ ಅನಂತ್ ಕುಮಾರ್ ಅವರ ಶ್ರಮಿಸಿದ್ದರು. ಯುವಕರಿದ್ದಾಗಲೇ ನಾಯಕರಾಗಿ ಹೊರಹೊಮ್ಮಿದವರು.ನಾನು ಈಗಾಗಲೇ ಅನಂತ್ ಕುಮಾರ್‌ರವರ ಪತ್ನಿ ತೇಜಸ್ವಿಯವರ ಜೊತೆ ಮಾತಾಡಿ ಸಾಂತ್ವನ ಹೇಳಿದ್ದೇನೆ. ಅವರ ಆತ್ಮಕ್ಕೆ ದೇವರು ಶಾಂತಿ ಸಿಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಅನಂತ ಜಿ ಅವರು ವಿವಿಧ ಸಚಿವ ಖಾತೆಗಳಲ್ಲಿ ಸೇವೆ ಸಲ್ಲಿಸಿದ ಗಮನಾರ್ಹ ಅಡ್​ಮಿನಿಸ್ಟ್ರೇಟರ್​.  ಅವರ  ನಿಧನ ಬಿಜೆಪಿಗೆ ತುಂಬಲಾರದ ನಷ್ಟ.  ದೇವರು ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ಅಮಿತ್​ ಷಾ ಅವರು ಸಂತಾಪ ಸೂಚಿಸಿದ್ದಾರೆ.

 ಅನಂತ ಕುಮಾರ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.  ಅನಂತ ಕುಮಾರ್​ ಸಾವಿನ ಸಂಗತಿ ನೋವು ತಂದಿದೆ. ಅವರ ಆತ್ಮಕ್ಕೆ  ಶಾಂತಿ ಸಿಗಲಿ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಟ್ವಿಟರ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಅನಂತ್ ಕುಮಾರ್ ಅವರ ಮರಣ ನೋವು ತಂದಿದೆ. ಅವರು ನನ್ನ ಸಹೋದರನಂತೆ ಇದ್ದರು. ಆತ್ಮಕ್ಕೆ ಶಾಂತಿ ಸಿಗಲಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್​ ಅವರು  ಟ್ವೀಟ್  ಮೂಲಕ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವರಾದ ಅನಂತ್ ಕುಮಾರ್ ಅವರು ನಮ್ಮನ್ನು ಅಗಲಿದ್ದಾರೆ ಎನ್ನುವ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ದುಃಖವಾಗಿದೆ. ದೆಹಲಿಯಲ್ಲಿ ಕರ್ನಾಟಕದ ಧ್ವನಿಯಂತಿದ್ದ ಅನಂತ್ ಕುಮಾರ್ ಅವರು ಒಬ್ಬ ಪಳಗಿದ ಮುತ್ಸದ್ದಿ ರಾಜಕಾರಣಿಯಾಗಿದ್ದರು. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ. ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಅನಂತ್ ಕುಮಾರ್  ಅವರ ನಿಧನಕ್ಕೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅನಂತಕುಮಾರ್ ಅವರ ಅಕಾಲಿಕ ಮರಣ ತೀವ್ರವಾಗಿ ನೋವುಂಟುಮಾಡಿದೆ. ಒಬ್ಬ ಮೌಲ್ಯ ಆಧಾರಿತ ರಾಜಕಾರಣಿ, ಜನ ಪರ ನಾಯಕ, ಸಂಸತ್ ಸದಸ್ಯರಾಗಿ ಗಮನಾರ್ಹ ಕೊಡುಗೆ ನೀಡಿದವರು  ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಅನಂತಕುಮಾರ್ ಅವರ ನಿಧನವು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಆದ ಭಾರೀ ನಷ್ಟ. ಒಬ್ಬ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡು ರಾಜ್ಯ ಹಾಗೂ ದೇಶ ಬಡವಾಗಿದೆ. ಎಂತಹ ಕ್ಲಿಷ್ಟ ಪರಿಸ್ಥಿತಿಯಲ್ಲೂ ಉತ್ತಮ ಸಲಹೆಗಳನ್ನು ನೀಡಿ ಪಕ್ಷದ ಬೆಳವಣಿಗೆಗೆ ಕಾರಣವಾಗಿದ್ದ ಇವರ ಕೊಡುಗೆಗಳನ್ನು ಎಂದಿಗೂ ಮರೆಯಲಾಗದು. ದೇವರು ಇವರ ಆತ್ಮಕ್ಕೆ ಶಾಂತಿ ನೀಡಲಿ.ಎಂದು ಬಿ ಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ 

ಕೇಂದ್ರ ಸಚಿವ ಅನಂತ್‌ಕುಮಾರ್ ಸಾವಿನ ಸುದ್ದಿ ಕೇಳಿ‌ ಆಘಾತಗೊಂಡಿದ್ದೇನೆ. ಕರ್ನಾಟಕ ಮತ್ತು ದೆಹಲಿ ನಡುವಿನ ಕೊಂಡಿಯೊಂದು‌ ಕಳಚಿಬಿದ್ದಿದೆ. ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಅವಕಾಶ ಮತ್ತು ವಯಸ್ಸಿತ್ತು. ಅವರ ಕುಟುಂಬ ವರ್ಗದ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನೆಚ್ಚಿನ ನಾಯಕರಾಗಿದ್ದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ. ಹಿರಿಯರಾಗಿ ಮಾರ್ಗದರ್ಶನ ನೀಡುವ ಜತೆಗೆ ಪಕ್ಷದ ಬೆಳವಣಿಗೆಗೆ ಅಪಾರ ಸೇವೆ ಸಲ್ಲಿಸಿದವರು. ಸಾವಿನ ನೋವು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ದಯಪಾಲಿಸಲಿ. ಅನಂತಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರೀರಾಮುಲು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.