ಹಾಸನ: : ಹಾಸನ ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಇಂದು ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ, ಭವಾನಿ ರೇವಣ್ಣ ಉಪಸ್ಥಿತರಿದ್ದರು.