ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು ಚಿಕ್ಕವನಾಗಿದ್ದಾಗಿಂದಲೂ ಸಿದ್ದರಾಮಯ್ಯ ಅವರನ್ನು ನೋಡಿ ನಾನು ಬೆಳೆದಿದ್ದೇನೆ. ನಮ್ಮ ಕುಟುಂಬಕ್ಕೂ ಹಾಗೂ ಸಿದ್ದರಾಮಯ್ಯ ಅವರಿಗೆ ಉತ್ತಮ ಬಾಂಧವ್ಯ ಇದೆ. ಹೀಗಾಗಿ ನಾನು ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ಹಾಸನ, ಅರಕಲಗೂಡು,ಅರಸೀಕೆರೆ, ಕಡೂರಿಗೆ ಬರುವುದಾಗಿ ಹೇಳಿದ್ದಾರೆ ಎಂದರು.
ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ನಾಮಪತ್ರ ಸಲ್ಲಿಸುವ ವೇಳೆ ನೆರೆದಿದ್ದ ಜನ ಸಾಗರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಪ್ರಜ್ವಲ್ ರೇವಣ್ಣ ಅವರು 400 .ರೂ, 500. ರೂ ಕೊಟ್ಟು ಜನ ಸೇರಿಸೋದು ದೊಡ್ಡದಲ್ಲ.ದುಡ್ಡು ಕೊಟ್ಟರೆ ನಾವು ಹಾಸನ ಜಿಲ್ಲೆ ತುಂಬ ಜನ ಸೇರಿಸ್ತೇವೆ ಎಂದು ತಿಳಿಸಿದರು.










