ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಿದ ಪ್ರಜ್ವಲ್ ರೇವಣ್ಣ…

157
firstsuddi

ಚಿಕ್ಕಮಗಳೂರು : ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಪ್ರಚಾರಕ್ಕಾಗಿ ಹಾಸನ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕಡೂರು ತಾಲೂಕು ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದು, ಇದೇ ಮೊದಲ ಬಾರಿಗೆ ಕಡೂರಿಗೆ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರು ಪ್ರಚಾರ ನಡೆಸಿದರು. ಕಾಂಗ್ರೆಸ್ ಕಚೇರಿಯಿಂದ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಮಾಜಿ ಶಾಸಕ ವೈ ಎಸ್ ವಿ ದತ್ತ ಸೇರಿದಂತೆ ಜೆಡಿಎಸ್ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.