ಹಾಸನ: ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಈಶ್ವರ ದೇವಸ್ಥಾನದಲ್ಲಿ ಪೂಜೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ ಖಚಿತ. ಆದರೆ ಯಾವ ಕ್ಷೇತ್ರ ಎನ್ನುವುದರ ಕುರಿತು ಇದುವರೆಗೂ ಯಾವುದೇ ಚರ್ಚೆ ಆಗಿಲ್ಲ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.