ದೆಹಲಿ : ನಟ ಪ್ರಕಾಶ್ ರೈ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ವಿವರಗಳನ್ನು ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಕೆಲ ದಿನಗಳ ಹಿಂದೆ ಪ್ರಕಾಶ್ ರೈ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದರು. ಆದರೆ ಇದೀಗ ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರನ್ನು ದೆಹಲಿಯಲ್ಲಿ ಇಂದು ಭೇಟಿ ಮಾಡಿ ಹಲವು ವಿಷಯಗಳನ್ನು ಚರ್ಚೆ ನಡೆಸಿರುವ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.











