ಕೊಪ್ಪ : ವಿನಯ್ ಗುರೂಜಿ ಆಶೀರ್ವಾದ ಪಡೆದ ಪ್ರಮೋದ್ ಮಧ್ವರಾಜ್…

220
firstsuddi

ಚಿಕ್ಕಮಗಳೂರು : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಪ್ರಮೋದ್ ಮಧ್ವರಾಜ್ ಅವರು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರುವ ದತ್ತಾಶ್ರಮಕ್ಕೆ ಭೇಟಿ ನೀಡಿ ಅವಧೂತ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದರು. ಬಳಿಕ ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರ ಜೊತೆ ಶೃಂಗೇರಿ ಶಾಸಕ ರಾಜೇಗೌಡ ಅವರು ಸಾಥ್ ನೀಡಿದರು. ಈ ಹಿಂದೆ ಹೆಚ್.ಡಿ. ದೇವೇಗೌಡ, ರಮೇಶ್ ಕುಮಾರ್, ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ಆಶ್ರಮಕ್ಕೆ ಭೆಟಿ ನೀಡಿ ವಿನಯ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದರು.