ಪ್ರಸಾದ ದುರಂತ :ಮೃತರ ಕುಟುಂಬಕ್ಕೆ ಕೆಪಿಸಿಸಿಯಿಂದ 1 ಲಕ್ಷ ರೂ ಪರಿಹಾರ…

210
firstsuddi

ಮೈಸೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ  ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದ್ದಾರೆ.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಇದೊಂದು ದುಃಖದ ಘಟನೆ. ಘಟನೆ ಬಗ್ಗೆ ತನಿಖೆ ನಡೆಯಬೇಕು. ವೈಯಕ್ತಿಕ ಕಾರಣಗಳಿಂದ ಈ ರೀತಿಯ ಕೆಲಸ ಮಾಡಿದ್ದರೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೆಪಿಸಿಸಿ ಕಡೆಯಿಂದ ಮೃತರ ಕುಟುಂಬದವರಿಗೆ 1 ಲಕ್ಷ ಪರಿಹಾರ ಕೊಡಲು ನಿರ್ಧಾರ ಮಾಡಿದ್ದೇವೆ ಎಂದಿದ್ದಾರೆ.