ಪ್ರಸಾದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ…

373
firstsuddi

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ   ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ಗೋಪುರ ಶಂಕುಸ್ಥಾಪನೆ  ನಿನ್ನೆ ನಡೆದಿತ್ತು.  ಶಂಕುಸ್ಥಾಪನೆ ಬಳಿಕ  ಮಾರಮ್ಮ ದೇವಾಲಯದಲ್ಲಿ  ಪ್ರಸಾದ ಸೇವಿಸಿ 11 ಮಂದಿ ಮೃತಪಟ್ಟಿದ್ದು,  80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಸುಲ್ವಾಡಿ ಗ್ರಾಮದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಈ ಘಟನೆಯಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳಿಗೆ  ಕುಮಾರಸ್ವಾಮಿ   ಅವರು ಸೂಚಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು. ಹಾಗೂ  ಮುಖ್ಯಮಂತ್ರಿಗಳು ಕೂಡಲೇ ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಿ ಕೆ.ಆರ್. ಆಸ್ಪತ್ರೆ ಹಾಗೂ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಿ  ಅವರ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.  ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದ್ದಾರೆ.  ಮೃತಪಟ್ಟವರ ಕುಟುಂಬಕ್ಕೆ ತಲಾ 5ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.