ಚೆಸ್‌ನಲ್ಲಿ ಪ್ರತೀಕ್‌ಗೆ ಗೆಲುವಿನ ಕಿರೀಟ; ಜಿಲ್ಲಾ ಮಟ್ಟಕ್ಕೆ ಆಯ್ಕೆ.

3

ಮೂಡಿಗೆರೆ: ಚದುರಂಗದಾಟದಲ್ಲಿ ಚಾಕಚಕ್ಯತೆ ಮೆರೆದ ನಳಂದ ಕಾಲೇಜಿನ ವಿದ್ಯಾರ್ಥಿ ಪ್ರತೀಕ್.ಪಿ, ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೆ.8ರಂದು ನಡೆದ ಮೂಡಿಗೆರೆ ಮತ್ತು ಕಳಸ ತಾಲ್ಲೂಕು ಮಟ್ಟದ ಕಾಲೇಜು ವಿದ್ಯಾರ್ಥಿಗಳ ಚೆಸ್ ಕ್ರೀಡಾಕೂಟದಲ್ಲಿ ಪ್ರತೀಕ್ ಎದುರಾಳಿಗಳನ್ನು ಮಣಿಸಿ ಅಗ್ರಸ್ಥಾನಕ್ಕೇರಿದರು.

ಪ್ರತೀಕ್ ಅವರ ಸಾಧನೆಗೆ ಕಾಲೇಜಿನ ಆಡಳಿತಾಧಿಕಾರಿ ಗಣೇಶ್, ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.