ಚಿಕ್ಕಮಗಳೂರು: 2017-18ನೇ ಸಾಲಿನ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಎಲ್‍ಕೆಜಿ ಮತ್ತು ಯುಕೆಜಿಯ 40 ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಕುರುಹಿನಶೆಟ್ಟಿ ಸಂಘದ ವತಿಯಿಂದ ವಿತರಿಸಲಾಯಿತು.
ನಗರದ ಶ್ರೀ ರಂಗನಾಥ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಆವರಣದಲ್ಲಿ ಜಿಲ್ಲಾ ಶ್ರೀ ನೀಲಕಂಠೇಶ್ವರ ಕುರುಹಿನಶೆಟ್ಟಿ ಸಂಘ ಮತ್ತು ಕುರುಹಿನಶೆಟ್ಟಿ ಕೇಂದ್ರ ಸಂಘ ಬೆಂಗಳೂರು ಇವರ ವತಿಯಿಂದ ಈ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.
ನಂತರ ಸಿಆರ್‍ಪಿಎಫ್‍ನಲ್ಲಿ ಸಾಲಿನಲ್ಲಿ ಆಯ್ಕೆಯಾಗಿ ಪ್ರಸ್ತುತ ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ನವೀನ್‍ಶೆಟ್ಟಿ ಮತ್ತು ಸರ್ಕಾರಿ ಶಾಲೆಯಲ್ಲಿ ಕ್ರಾಫ್ಟ್ ಟೀಚರ್ ಆಗಿ ಸೇವೆ ಸಲ್ಲಿಸಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುವ ಶ್ರೀಮತಿ ರಮಾಮಣಿ ಇವರಿಗೆ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಘದ ಅಧ್ಯಕ್ಷ ಈಶ್ವರಪ್ಪ ಮತ್ತು ಉಪಾಧ್ಯಕ್ಷ ಲಕ್ಷ್ಮೀಕಾಂತ್, ಕಾರ್ಯದರ್ಶಿ ಗೋಪಾಲಕೃಷ್ಣ, ಖಜಾಂಚಿ ವಿನೋದ್ ಹಾಗೂ ಮಂಜುನಾಥಶೆಟ್ಟಿ, ಜಿಲ್ಲಾ ಸಂಘದ ಸಿ.ಹೆಚ್. ಕಾರ್ಯದರ್ಶಿ ಇಂದುಕುಮಾರ್ ಮತ್ತು ಸಂಘದ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು ಹಾಜರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೊನ್ನಶೆಟ್ಟಿ ವಹಿಸಿದ್ದರು. ಕಾರ್ಯದರ್ಶಿಗಳಾದ ಬಿ.ಸಿ.ಮೋಹನ್ ಸ್ವಾಗತಿಸಿದರು. ವಾಸುದೇವ್ ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಕೊನೆಯಲ್ಲಿ ಕಾಶ್ಮೀರದಲ್ಲಿ ದಾಳಿಯಲ್ಲಿ ನಿಧನರಾದ ಸೈನಿಕರಿಗೆ ಸಂಘದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
Home ಸ್ಥಳಿಯ ಸುದ್ದಿ ಕುರುಹಿನಶೆಟ್ಟಿ ಸಂಘದ ವತಿಯಿಂದ 2017-18ನೇ ಸಾಲಿನಲ್ಲಿ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ...










