ಉಡುಪಿ: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜ್ಯಪಾಲ ವಜುಭಾಯ್ ವಾಲಾ ಅವರು ಪಾಲ್ಗೊಂಡಿದ್ದಾರೆ. ರಾಷ್ಟ್ರಪತಿ ಅವರು ಆಗಮಿಸಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.