ಕುಂದಾನಗರಿಗೆ ಆಗಮಿಸಲಿರುವ ರಾಷ್ಟ್ರಪತಿ ರಾಮನಾಥ್​ ಕೋವಿಂದ್​…

260
firstsuddi

ಬೆಳಗಾವಿ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ದೀಪಕ್​ ಮಿಶ್ರಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಇಂದು ಕುಂದಾನಗರಿಗೆ ಆಗಮಿಸುತ್ತಿದ್ದು,ಕೆ.ಎಲ್​.ಎಸ್ ಕಾನೂನು ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲು ಗಣ್ಯರು ಆಗಮಿಸುತ್ತಿದ್ದು, ಸಕಲ ವ್ಯವಸ್ಥೆಯೊಂದಿಗೆ ಗಣ್ಯರನ್ನು ಬರಮಾಡಿಕೊಳ್ಳಲು ಕುಂದಾನಗರಿ ಸಿದ್ಧವಾಗಿದೆ.ನಗರದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.ಅಮೃತ ಮಹೋತ್ಸವ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಸುವರ್ಣ ವಿಧಾನಸೌಧದಲ್ಲಿ ಜನತ ದರ್ಶನ ನಡೆಸಲಿದ್ದಾರೆ.