ಸಿಯೋಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಶುಕ್ರವಾರ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಾರೆ. ಇದು 130 ಕೋಟಿ ಭಾರತೀಯರಿಗೆ ಸಂದ ಗೌರವ ಎಂದು ತಿಳಿಸಿದರು.










