ನವದೆಹಲಿ: ಐದು ರಾಜ್ಯಗಳ ಮತದಾರರು ನೀಡಿದ ತೀರ್ಪನ್ನು ನಾವು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಜನರ ಕಲ್ಯಾಣಕ್ಕಾಗಿ ಶ್ರಮಿಸಿದ್ದೆವು. ಹಿಂದಿನ ಚುನಾವಣೆಯಲ್ಲಿ ಛತ್ತೀಸ್ ಗಡ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಗೆಲುವು ನೀಡಿ ರಾಜ್ಯದ ಸೇವೆ ಮಾಡಲು ಅವಕಾಶ ನೀಡಿದ್ದಕ್ಕೆ ಜನತೆಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿದ್ದಾರೆ.

ಗೆಲುವು ಸಾಧಿಸಿರುವ ಕೆಸಿಆರ್ ಹಾಗೂ ಎಂಎನ್ಎಫ್ ಪಕ್ಷಗಳಿಗೆ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.











