ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ದೇಶಾದ್ಯಂತ ಮೇ.17ರಂದು ಲಾಕ್ಡೌನ್ 3.0 ಮುಕ್ತಾಯವಾಗಲಿದ್ದು, ಈ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ನಿನ್ನೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಲಾಕ್ಡೌನ್ ಮುಂದುವರೆಸುವ ಬಗ್ಗೆ ಹಲವಾರು ಮಾಹಿತಿಯನ್ನು ಪಡೆದುಕೊಂಡಿದ್ದು, ಲಾಕ್ಡೌನ್ಗೆ ಸಂಬಂಧಿಸಿದಂತೆ ಇಂದು ಪ್ರಧಾನಿ ಮೋದಿ ಅವರು ಸಂದೇಶ ನೀಡಲಿದ್ದು, ಲಾಕ್ಡೌನ್ ಮುಂದುವರೆಸುತ್ತಾರಾ ಅಥವಾ ಲಾಕ್ಡೌನ್ ಸಡಿಲಿಕೆ ಮಾಡುತ್ತಾರಾ ಎಂಬುವುದನ್ನು ಕಾದುನೋಡಬೇಕಾಗಿದೆ.










