‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ…

291
firstsuddi

ನವದೆಹಲಿ: ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಪರಿಸರ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಅವಾರ್ಡ್’ ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಿದರು. ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್ ಅನ್ನು ವಿಶ್ವಸಂಸ್ಥೆಯ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಪ್ರಧಾನಿ ಮೋದಿ ಅವರಿಗೆ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರಶಸ್ತಿಯನ್ನು ರಾಷ್ಟ್ರದ ಜನತೆಗೆ ಅರ್ಪಿಸಿತ್ತೇನೆ,  ವಾತಾವರಣ ಸಂಸ್ಕೃತಿಯೊಂದಿಗೆ ನೇರ ಸಂಬಂಧ ಹೊಂದಿದೆ. ಸಬ್ ಕ ಸಾತ್ ಎಂಬ ಘೋಷಣೆಯಲ್ಲಿ ಪ್ರಕೃತಿಯೂ ಒಳಗೊಂಡಿದೆ ಎಂದಿದ್ದಾರೆ.