ಮಂಗಳೂರು- ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಾ.ಜಿ ಪರಮೇಶ್ವರ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಇಲ್ಲ ಎಂದ ಅವರು ಸಮ್ಮಿಶ್ರ ಸರ್ಕಾರ ಹಿಂದಿನ ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುತದೆ , ಹಾಗೂ 2017-18ರಲ್ಲಿ 12000 ರೈತರು ಆತ್ಮಹತ್ಯೆಗೆ ಶರಣಾಗಿದ್ದು,ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ನಾವು ರೈತರ ಸಾಲ ಮನ್ನಾ ಮಾಡಿದ್ದು,ಇದಕ್ಕೆ ಕೇಂದ್ರ ಸರ್ಕಾರ ಅನುದಾನವನ್ನು ಕೊಟ್ಟಿದ್ರೆ ನಾವು ನೀರಾವರಿ ಕಾರ್ಯಕ್ರಮದ ಜೊತೆ ವಿವಿಧ ಯೋಜನೆಗಳನ್ನು ನೀಡಬಹುದಿತ್ತು ಆದರೆ ಪ್ರಧಾನ ಮಂತ್ರಿ ನೆರೇಂದ್ರ ಮೋದಿ ಅವರಿಗೆ ರೈತರ ಹಿತ ಬೇಕಾಗಿಲ್ಲ. ಎಂದು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.