ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಏಕತಾಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…

334
firstsuddi

ಅಹಮದಾಬಾದ್: ಗುಜರಾತ್ ನ ಕೆವಾಡಿಯಾದ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ, ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ, ಮಧ್ಯಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.