ಚಿಕ್ಕಮಗಳೂರು : ಖಾಸಗೀ ವಿದ್ಯಾ ಸಂಸ್ಥೆಗಳು ಹಿಂದಿನ ಕಾಲದ ಗುರುಕುಲ ಪದ್ದತಿಯ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಸಚಿವ ಸಿ.ಟಿ.ರವಿ ಅವರ ಪತ್ನಿ ಪಲ್ಲವಿ ರವಿ ಸಲಹೆ ಮಾಡಿದರು.
ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಸಮೃದ್ದಿ ಕಿಡ್ಸ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಹಳಷ್ಟು ವರ್ಷಗಳ ಹಿಂದೆ ಮನೆಯೆ ಮೊದಲ ಪಾಠಶಾಲೆಯಾಗಿತ್ತು, ಅಲ್ಲಿ ತಾಯಿ, ಅಜ್ಜ, ಅಜ್ಜಿ ಮಕ್ಕಳಿಗೆ ಮೊದಲ ಶಿಕ್ಷಕರಾಗಿ ಅವರಲ್ಲಿ ನಮ್ಮ ಸಂಸ್ಕøತಿ, ಸಂಸ್ಕಾರ ಮತ್ತು ಸಾಮಾನ್ಯ ಜ್ಞಾನವನ್ನು ತುಂಬುತ್ತಿದ್ದರು ಎಂದರು.
ಆದರೆ ಇಂದು ಪರಿಸ್ಥಿತಿ ಬದಲಾಗಿದೆ, ಒತ್ತಡದ ಬದುಕಿನಲ್ಲಿ ಹೆತ್ತವರಿಗೆ ಮಕ್ಕಳನ್ನು ತಿದ್ದಲು ಸಾಧ್ಯವಾಗುತ್ತಿಲ್ಲ, ಗುರುಕುಲ ಪದ್ದತಿಯೂ ಇಲ್ಲವಾಗಿದೆ ಇದರಿಂದಾಗಿ ಇಂದಿನ ಮಕ್ಕಳಲ್ಲಿ ನಮ್ಮ ಸಂಸ್ಕøತಿ,ಸಂಸ್ಕಾರ, ಸಾಮಾನ್ಯ ಜ್ಞಾನ ಇಲ್ಲದಂತಾಗಿದೆ ಎಂದು ವಿಷಾದಿಸಿದರು.
ಐಡಿಎಸ್‍ಜಿ ಕಾಲೇಜಿನ ಪ್ರಾಧ್ಯಾಪಕ ಡಾ|| ಹೆಚ್.ಎಂ.ಮಹೇಶ್ ಮಾತನಾಡಿ ಶಿಕ್ಷಕರು ಪಠ್ಯದ ಜೊತೆಗೆ ಮಕ್ಕಳಲ್ಲಿ ನಮ್ಮ ಸಂಸ್ಕøತಿ, ಸಂಸ್ಕಾರವನ್ನೂ ಬೆಳೆಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮೃದ್ದಿ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷ ಶಂಕರನಾರಾಯಣ ಭಟ್ ತಮ್ಮ ಸಂಸ್ಥೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಅವರನ್ನು ಉತ್ತಮ ನಾಗರೀಕರನ್ನಾಗಿಯೂ ಬೆಳೆಸುತ್ತಿದೆ ಎಂದು ತಿಳಿಸಿದರು.
ಶಾಲೆಯ ಅಭಿವೃದ್ದಿಗೆ ಸಹಕರಿಸಿದವರಿಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು, ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಂಶುಪಾಲೆ ಪೂಜಾ ವಾರ್ಷಿಕ ವರದಿಯನ್ನು ಮಂಡಿಸಿದರು, ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ನಗರಸಭೆ ಮಾಜಿ ಸದಸ್ಯ ಟಿ.ರಾಜಶೇಖರ್, ಡಾ|| ಐ.ಕೆ.ನಾಣಯ್ಯ, ಸಮೃದ್ದಿ ಚಾರಿಟಬಲ್ ಟ್ರಸ್ಟ್‍ನ ಕಾರ್ಯದರ್ಶಿ ಆನಂದ್‍ಕುಮಾರ್ ಶೆಟ್ಟಿ, ಖಜಾಂಚಿ ಉಜ್ವಲ್ ಡಿ.ಪಡುಬಿದ್ರಿ, ಟ್ರಸ್ಟಿ ಬಾಲಕೃಷ್ಣರಾವ್ ಉಪಸ್ಥಿತರಿದ್ದರು.
ಜೆನ್ನೀಫರ್ ವಾಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಟ್ರಸ್ಟಿ ರಾಜಾರಾಂ ಕೋಟೆ ಸ್ವಾಗತಿಸಿದರು, ಶಿಕ್ಷಕಿ ಪದ್ಮಾವತಿ ವಂದಿಸಿದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಖಾಸಗೀ ವಿದ್ಯಾ ಸಂಸ್ಥೆಗಳು ಹಿಂದಿನ ಕಾಲದ ಗುರುಕುಲ ಪದ್ದತಿಯ ಶಿಕ್ಷಣಕ್ಕೆ ಒತ್ತು ನೀಡಬೇಕು...










