ಜೋಧ್ಪುರ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತು ಅಮೆರಿಕಾದ ಖ್ಯಾತ ಗಾಯಕ ನಿಕ್ ಜೋನಸ್ ವಿವಾಹ ಜೋಧ್ ಪುರದ ಭವ್ಯ ಅರಮನೆಯಲ್ಲಿ ವಿವಾಹ ನಡೆದಿದೆ. ಡಿಸೆಂಬರ್ 1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹ ಕಾರ್ಯಕ್ರಮ ಜರುಗಿದ್ದು, ಡಿಸೆಂಬರ್ 2 ರಂದು ಹಿಂದೂ ಸಂಪ್ರದಾಯದಂತೆ ವಿವಾಹ ಕಾರ್ಯಕ್ರಮಗಳು ನೆರವೇರಿದೆ. ವಿವಾಹ ಪೂರ್ಣಗೊಳ್ಳುತ್ತಿದ್ದಂತೆ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ವಿರುದ್ಧ ಪ್ರಿಯಾಂಕ ಜಾಗೃತಿ ಮೂಡಿಸಿದ್ದು, ಈಗ ತಮ್ಮ ವಿವಾಹ ಕಾರ್ಯಕ್ರಮದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿರುವುದು ಸರೀಯೇ ಎಂದು ಟ್ವಿಟ್ಟರ್ ನಲ್ಲಿ ಪ್ರಿಯಾಂಕ ಚೋಪ್ರಾ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.










